ಗ್ರಾಮ ವಾಸ್ತವ್ಯದ ಕುರಿತು ಸಿಎಂ ಹೇಳಿದ್ದೇನು?

ಗುರುವಾರ, 27 ಜೂನ್ 2019 (13:28 IST)
ಕಲಬುರಗಿ : ಮೈತ್ರಿ ಸರಕಾರವನ್ನು ಜನರ ಹತ್ತಿರಕ್ಕೆ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.




ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದೆ. ಈ ಭಾಗದಲ್ಲಿ ಹೊಸ ಶಾಲೆ, ಕಟ್ಟಡ, ಶಿಕ್ಷಕರ ನೇಮಕಾತಿ ಸೇರಿದಂತೆ ಶಾಲೆಗಳ ಮಂಜೂರಾತಿ ಸೇರಿದಂತೆ ಈ ಭಾಗದ ಶಿಕ್ಷಣ ಅಭಿವೃದ್ಧಿ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಲು ಮುಂದಿನ ವಾರ ಅಧಿಕಾರಿಗಳ ಉನ್ನತ ಮಟ್ಟದ ಸಭೆ ಕರೆಯಲಾಗುವುದು ಎಂದು ಹೇಳಿದ್ದಾರೆ.


ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಳೆಯಿಂದಾಗಿ ಮುಂದೂಡಲ್ಪಟ್ಟಿತ್ತು ಈ ಗ್ರಾಮದಲ್ಲಿ ಸುಮಾರು 500 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು , ಗ್ರಾಮದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳಲ್ಲದೆ ಎಲ್ಲ ಹಳ್ಳಿಗಳಲ್ಲಿಯೂ ಮೂಲ ಭೂತ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಜರುಗಿಸಲಾಗುವುದು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ