ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ಮಾಡಿದ್ದೇನು?

ಭಾನುವಾರ, 7 ಜುಲೈ 2019 (18:06 IST)
ಮಂಡ್ಯದಲ್ಲಿ ಮತ್ತೆ ರೈತ ನಾಯಕರ ಆಕ್ರೋಶ ವ್ಯಕ್ತವಾಗತೊಡಗಿದೆ.

ಮಂಡ್ಯ ಜಿಲ್ಲೆ ಕೃಷ್ಣರಾಜಸಾಗರ ಮತ್ತು ಗೊರೂರು ಅಣೆಕಟ್ಟೆಗಳಿಂದ ಒಣಗುತ್ತಿರುವ ಕಬ್ಬಿನ ಬೆಳೆಗೆ ನೀರು ಹರಿಸುವಂತೆ ಒತ್ತಾಯ ಕೇಳಿಬಂದಿದೆ.

ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆ.ಆರ್.ಪೇಟೆ ಪಟ್ಟಣದ ಮಿನಿವಿಧಾನಸೌಧಕ್ಕೆ ತಮ್ಮ ಸಾಕು ಪ್ರಾಣಿಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ರೈತ ಮುಖಂಡರು.

ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನೂರಾರು ರೈತರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎತ್ತಿನಗಾಡಿಗಳು ಹಾಗೂ ತಮ್ಮ ಸಾಕು ಪ್ರಾಣಿಗಳೊಂದಿಗೆ ಆಗಮಿಸಿದ್ರು. ರೈತರ ಜೀವನದ ಜೊತೆಯಲ್ಲಿ ಚೆಲ್ಲಾಟವಾಡುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಒಣಗುತ್ತಿರುವ ಬೆಳೆಗಳನ್ನು ಉಳಿಸಲು ಜಲಾಶಯಗಳಿಂದ  ನೀರು ಹರಿಸುವಂತೆ ಒತ್ತಾಯಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ