ಕೊರೊನಾಕ್ಕೆ ಮೃತಪಟ್ಟವರ ಅಂತ್ಯ ಸಂಸ್ಕಾರದ ಬಗ್ಗೆ ಶಾಸಕಿ ಹೇಳಿದ್ದೇನು?
ಮಂಗಳವಾರ, 7 ಜುಲೈ 2020 (19:38 IST)
ಕೋವಿಡ್-19ನಿಂದಾಗಿ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡುವ ಕುರಿತು ಅಧಿಕಾರಿಗಳಿಗೆ ಶಾಸಕಿ ಸೂಚನೆ ಕೊಟ್ಟಿದ್ದಾರೆ.
ಜನವಸತಿ ಇಲ್ಲದ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳ ಗುರುತಿಸುವಂತೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೊರೊನಾ ಸೋಂಕಿನಿಂದ ದಾಖಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ನಂತರ ಆತನ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಜನರು ವಿರೋಧ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಯಾವುದೇ ಕಾರಣಕ್ಕೂ ಜನವಸತಿ ಪ್ರದೇಶದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಬಾರದು. ಜನವಸತಿಯಿಂದ ದೂರ ಇರುವ 10 ರಿಂದ 15 ಗುಂಟೆ ಸ್ಥಳವನ್ನು ಗುರುತಿಸಬೇಕು ಎಂದಿದ್ದಾರೆ.