ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ , ದ್ವಿತೀಯ ಪಿಯು ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?
ಭಾನುವಾರ, 23 ಮೇ 2021 (11:02 IST)
ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ , ದ್ವಿತೀಯ ಪಿಯು ಪರೀಕ್ಷೆ ನಡೆಸುವ ವಿಚಾರ ಪರೀಕ್ಷೆಗಳನ್ನು ನಡೆಸುವ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಇಂದು ನಡೆವ ಕೇಂದ್ರ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ , ಸಚಿವರಾದ ರಾಜನಾಥ್ ಸಿಂಗ್, ಪ್ರಕಾಶ್ ಜಾವಡೇಕರ್ , ಸ್ಮೃತಿ ಇರಾನಿ ಎಲ್ಲಾ ರಾಜ್ಯದ ಶಿಕ್ಷಣ ಸಚಿವರು ಭಾಗಿಯಾಗಿ ತಮ್ಮ ನಿಲುವು ತಿಳಿಸಲಿದ್ದಾರೆ.
ಈ ಬಗ್ಗೆ ಮಾತನಾಡಿದ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟ. ಈಗ ಪರೀಕ್ಷೆ ನಡೆಸಿದರೆ ಕೊರೊನಾ ಮತ್ತಷ್ಟು ಹೆಚ್ಚಾಗುತ್ತೆ. ಉಪಚುನಾವಣೆ ವೇಳೆ ಕೊರೊನಾಗೆ ಹಲವು ಶಿಕ್ಷಕರು ಸಾವನ್ನಪ್ಪಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಶಿಕ್ಷಕರು ಮೃತಪಟ್ಟಿದ್ದಾರೆ. ಇನ್ನೂ ಹಲವು ಶಿಕ್ಷಕರು ಕೊರೊನಾದಿಂದ ಬಳಲುತ್ತಿದ್ದಾರೆ. ಈ ನಡುವೆ ರಾಜ್ಯಕ್ಕೆ 3ನೇ ಅಲೆ ಆತಂಕ ಎದುರಾಗಲಿದೆ. ಆದರೂ ದ್ವಿತಿಯ ಪಿಯು, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕು. ಆಗಸ್ಟ್ ವೇಳೆಗೆ ಸೋಂಕಿನ ಪ್ರಮಾಣ ತಗ್ಗುವ ಸಾಧ್ಯತೆಯಿದೆ. ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲು ಚಿಂತನೆ ನಡೆಸುವ ಬಗ್ಗೆ ತಿಳಿಸಿದ್ದಾರೆ.