ದೆಹಲಿ ಮಸೀದಿಗೆ ಹೋಗಿ ಬಂದೋರಿಗೆ ರಾಜ್ಯ ಸರಕಾರ ಹೇಳಿದ್ದೇನು?
ಶುಕ್ರವಾರ, 3 ಏಪ್ರಿಲ್ 2020 (14:03 IST)
ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಭಾಗವಹಿಸಿದವರಲ್ಲಿ ಸರಕಾರ ಮನವಿ ಮಾಡಿದೆ.
ಹೊರ ರಾಜ್ಯ ಮತ್ತು ಹೊರದೇಶಗಳಿಂದ ಬಂದಂತಹವರು ಕಡ್ಡಾಯವಾಗಿ ಸ್ವಯಂ ಪ್ರೇರಣೆಯಿಂದ ವೈದ್ಯಕೀಯ ತಪಾಸಣೆಗೊಳಗಾಗಲು ಎಲ್ಲಾ ಮಹನೀಯರಲ್ಲಿ ವಿನಂತಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಅಂತಹ ಮಹನೀಯರು ವೈದ್ಯಕೀಯ ತಪಾಸಣೆಗೊಳಗಾಗುವುದನ್ನು ನಿರ್ಲಕ್ಷಿಸಿದಲ್ಲಿ ತಮ್ಮ ಜೀವಕ್ಕೂ ಮತ್ತು ತಮ್ಮ ಬಂಧು ಬಳಗದವರ ಜೀವಕ್ಕೂ ತೊಂದರೆ ಮಾಡಿದಂತಾಗುತ್ತದೆ. ಅಲ್ಲದೇ ಸಮುದಾಯದ ಸ್ವಾಸ್ಥ್ಯವನ್ನು ಹಾಳುಮಾಡಿದಂತಾಗುತ್ತದೆ ಎಂದಿದ್ದಾರೆ. ತಪ್ಪಿದಲ್ಲಿ ಅಂತಹವವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಈಗಾಗಲೇ ಜಿಲ್ಲಾಡಳಿತಗಳಿಗೆ ಮತ್ತು ತಾಲೂಕು ಆಡಳಿತಗಳಿಗೆ ಸೂಚನೆ ನೀಡಲಾಗಿದೆ ಎನ್ನುವ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.