ಸಿಎಂ ಯಡಿಯೂರಪ್ಪಗೆ ಟಿಪ್ಪು ಸೇನೆ ಹೇಳಿದ್ದೇನು?
ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರುವ ರಾಜ್ಯ ಸರಕಾರದ ಕ್ರಮಕ್ಕೆ ಟಿಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋಲಾರದಲ್ಲಿ ಟಿಪ್ಪು ಸೆಕ್ಯೂಲರ್ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.
ಟಿಪ್ಪು ಜಯಂತಿ ರದ್ದು ಮಾಡಿದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಲಾಯಿತು.
ಟಿಪ್ಪು ಜಯಂತಿ ರದ್ದು ಮಾಡಿರೋ ಆದೇಶವನ್ನ ಸರಕಾರ ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಲಾಯಿತು.
ಸಿಎಂ ಬಿ.ಎಸ್. ಯಡಿಯೂರಪ್ಪ ಧರ್ಮಗಳನ್ನ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ರು.
ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ರು. ರಾಜ್ಯ ಸರ್ಕಾರ ಆದೇಶ ವಾಪಸ್ಸು ಪಡೆಯದಿದ್ದರೆ ಟಿಪ್ಪು ಸೆಕ್ಯೂರಲ್ ಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಲಾಯಿತು.