ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡುವ ವಿಚಾರದ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಮಂಗಳವಾರ, 1 ಜನವರಿ 2019 (13:01 IST)
ಬೆಂಗಳೂರು : ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ‘ನಮ್ಮ ಜೊತೆ ಸಂಪರ್ಕ ಮಾಡದೇ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ. ಇದೆಲ್ಲಾ ಕೇವಲ ಊಹಾಪೋಹ’ ಎಂದು ತಿಳಿಸಿದ್ದಾರೆ.

 

‘ನಾವು ಲೋಕಸಭಾ ಚುನಾವಣೆಯ ತಯಾರಿಯಲ್ಲಿ ಇದ್ದೇವೆ. ಸರ್ಕಾರ ರಚನೆಯತ್ತ ನಮ್ಮ ಗಮನ ಇಲ್ಲ. ಜಾರಕಿಹೊಳಿ ಸಹೋದರ ನೀಡಿದ ಹೇಳಿಕೆ ನೋಡಿದ್ದೇನೆ. ಆದರೆ ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು  ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ