ಶಾಲೆಗೆ ಹೋಗುವಾಗ ಅಪ್ರಾಪ್ತ ಬಾಲಕಿಗೆ ಯುವಕರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಪ್ರಾಪ್ತ ಬಾಲಕಿಗೆ ಯುವಕರು ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದರು.ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರಂತೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.
ತೆಲಂಗಾಣದ ಹನ್ಮಕೊಂಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹೈಸ್ಕೂಲ್ ಓದುತ್ತಿದ್ದ ಬಾಲಕಿಗೆ ಯುವಕರು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಅವಮಾನ ಸಹಿಸಲಾರದೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.