ಈಡೇರಿಸಲು ಸಾಧ್ಯವಾಗದ ಬೇಡಿಕೆ ಇಟ್ಟರೆ ಹೇಗೆ?’

ಸೋಮವಾರ, 11 ಸೆಪ್ಟಂಬರ್ 2023 (17:40 IST)
ಖಾಸಗಿ ವಾಹನಗಳ ಮಾಲೀಕ ಮತ್ತು ಚಾಲಕರು ನಡೆಸಿದ ಬೆಂಗಳೂರು ಬಂದ್ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಡೇರಿಸಲು ಸಾಧ್ಯವಾಗುವಂತಹ ಬೇಡಿಕೆ ಇಟ್ಟರೆ ಸರಿ.. ಆದರೆ ಈಡೇರಿಸಲು ಸಾಧ್ಯವಾಗದ ಬೇಡಿಕೆ ಇಟ್ಟರೆ ಹೇಗೆ ಎಂದು ಪ್ರಶ್ನಿಸಿದ್ರು. ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲ ಆಗಲು ಶಕ್ತಿ ಯೋಜನೆ ತಂದಿದ್ದೇವೆ. ಹೀಗಾಗಿ ಅವರಿಗೆ ನಷ್ಟ ಆಗುತ್ತಿದೆ ಎನ್ನುವುದು ಅವರ ವಾದ. ನಷ್ಟ ಆಗುವುದು ಬಿಡುವುದು ಬೇರೆ. ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ ಎಂದು ಮರು ಪ್ರಶ್ನೆ ಹಾಕಿದ್ರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ