ಬೆಂಗಳೂರು : ಉಕ್ರೇನ್ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ.
ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ ಎಂದು ಟ್ವೀಟ್ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಒತ್ತಾಯ ಮಾಡಿದ್ದಾರೆ.