ಇಂಟಿಗ್ರೇಟೆಡ್ ಜಿಎಸ್ಟಿಯಿಂದ ಕೇಂದ್ರ ಜಿಎಸ್ಟಿಗೆ 35,369 ಕೋಟಿ ರೂ. ಮತ್ತು ರಾಜ್ಯ ಜಿಎಸ್ಟಿಗೆ 29,769 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ಮೇ ತಿಂಗಳಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 63,780 ಕೋಟಿ ರೂ. ಮತ್ತು 65,597 ಕೋಟಿ ರೂ.ಗಳಾಗಿವೆ.
ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 12% ರಷ್ಟು ಏರಿಕೆಯಾಗಿದ್ದು, 10,317 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದ್ದು ಎರಡನೇ ಸ್ಥಾನ ಪಡೆದಿದೆ. ಕಳೆದ ಮೇ ತಿಂಗಳಿನಲ್ಲಿ 9,232 ಕೋಟಿ ರೂ. ಸಂಗ್ರಹವಾಗಿತ್ತು.
ಮಹಾರಾಷ್ಟ್ರದಲ್ಲಿ 23,536 ಕೋಟಿ ರೂ. ಸಂಗ್ರಹವಾಗಿದ್ದು ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಗುಜರಾತ್ 9,800 ಕೋಟಿ ರೂ., ತಮಿಳುನಾಡು 8,953 ಕೋಟಿ ರೂ., ಉತ್ತರ ಪ್ರದೇಶದಲ್ಲಿ 7,468 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ.