ಸಚಿವೆ ಉಮಾಶ್ರೀಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಲು ಕಾರಣವೇನು…?

ಗುರುವಾರ, 3 ಮೇ 2018 (06:31 IST)
ಬೆಂಗಳೂರು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ  ಕಾರಣಕ್ಕೆ ತೇರದಾಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆದ ಸಚಿವೆ ಹಾಗು ನಟಿ ಉಮಾಶ್ರೀ ಅವರಿಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಕಾನೂನಿನ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ. ಆದರೆ ಸಚಿವೆ ಉಮಾಶ್ರೀ ಅವರು ಮಹಾಲಿಂಗಪುರದಲ್ಲಿ ಏಪ್ರಿಲ್‌ 29ರಂದು ನಡೆದ ಪಕ್ಷದ ಚುನಾವಣೆ ಪ್ರಚಾರ ಸಭೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಕಾಂಗ್ರೆಸ್‌ ಧ್ವಜ ಹಿಡಿದ 14 ವರ್ಷದೊಳಗಿನ ಮಕ್ಕಳು ಪ್ರಚಾರದಲ್ಲಿ ಬಳಸಿಕೊಂಡಿರುವುದು  ಚುನಾವಣಾ ಆಯೋಗ ಚಿತ್ರೀಕರಿಸಿಕೊಂಡಿರುವ ದೃಶ್ಯಗಳಲ್ಲಿ ಕಂಡುಬಂದಿದ್ದ ಕಾರಣದಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದು ಮೇಲ್ನೋಟಕ್ಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು. ಈ ಬಗ್ಗೆ 24 ಗಂಟೆಯೊಳಗಾಗಿ ಲಿಖಿತ ರೂಪದಲ್ಲಿ ಉತ್ತರ ಸಲ್ಲಿಸುವಂತೆ ಉಮಾಶ್ರೀ ಅವರಿಗೆ ಸೂಚಿಸಲಾಗಿದೆ ಎಂದು ಸುದ್ದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ