ಕಿಡಿಗೇಡಿಗಳು ಇಟ್ಟ ಬೆಂಕಿಗೆ ನಲುಗಿದ್ದೇನು?

ಸೋಮವಾರ, 4 ನವೆಂಬರ್ 2019 (18:51 IST)
ಕಿಡಿಗೇಡಿಗಳು ಬೆಂಕಿ ಇಟ್ಟು ಮಾಡಬಾರದ ಕೆಲಸ ಮಾಡಿದ್ದಾರೆ.

ಕಿಡಿಗೇಡಿಗಳಿಂದ ಕಬ್ಬಿಗೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮಂಡ್ಯದ ಕಿಕ್ಕೇರಿ ಸಮೀಪದ
ಚಿಕ್ಕಳಲೆ ಗ್ರಾದದ ಶಿವಕುಮಾರ್ ಎಂಬುವರಿಗೆ ಸೇರಿಂದ ಕಬ್ಬು ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಕಿಡಿಗೇಡಿಗಳು ಬೆಂಕಿ ಹಾಕಿದ್ದು, ಕಟಾವಿಗೆ ಬಂದ ಕಬ್ಬು ಸಂಪೂರ್ಣ ಸುಟ್ಟು ಹೋಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿಗಳು ಬಂದು ಸ್ವಲ್ಪ ಪ್ರಮಾಣದ ಕಬ್ಬನ್ನು ರಕ್ಷಿಸಿದ್ದಾರೆ.

ಕಿಕ್ಕೇರಿ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ