ಮಗ ತಪ್ಪು ಮಾಡಿದರೆ ತಂದೆಯ ಮೇಲೆ ಕ್ರಮ ಯಾವ ಕಾನೂನಿನಲ್ಲಿದೆ– ಜಾರ್ಜ್ ಪ್ರಶ್ನೆ

ಮಂಗಳವಾರ, 20 ಫೆಬ್ರವರಿ 2018 (15:23 IST)
ಮಗ ತಪ್ಪು ಮಾಡಿದರೆ ತಂದೆಯ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್‌ನಲ್ಲಿದೆ ಎಂದು ಸಚಿವ ಕೆ.ಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ.
 
ವಿಧಾನಸೌಧದದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ವಿಚಾರಕ್ಕಿಂತ ಸಂತೋಷ್ ವಿಚಾರದ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದಿದ್ದಾರೆ.‌
 
ವಿನಯ್ ಹಲ್ಲೆಗೊಳಗಾಗಿದ್ದಾರೆ. ಅವರ ಪತ್ನಿ ಪತ್ರ ಬರೆದರೂ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿಲ್ಲ. ಊರೆಲ್ಲ ಸುತ್ತುವ ಇವರಿಗೆ ಠಾಣೆಗೆ ಬರಲು ವಯಸ್ಸಿನ ಸಮಸ್ಯೆ ಆಗುತ್ತದೆ. ಮೊದಲು ಸಂತೋಷ್ ಪ್ರಕರಣದ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಕಿಡಿ ಕಾರಿದ್ದಾರೆ.
ಕೆಆರ್ ಪುರಂ  ಬಿಬಿಎಂಪಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲ. ಯಾರೇ ತಪ್ಪು ಮಾಡಿದರೂ  ಪೊಲೀಸರು ಕ್ರಮ ಜರುಗಿಸುತ್ತಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ