ಅಭ್ಯರ್ಥಿಗಳಿಗೆ ತೊಂದರೆ ಕೊಟ್ಟು ಆತುರದಿಂದ ಕೆಪಿಎಸ್‌ಸಿ ಪರೀಕ್ಷೆ ಮಾಡುವ ಉದ್ದೇಶವೇನು: ಕುಮಾರಸ್ವಾಮಿ ಪ್ರಶ್ನೆ

Sampriya

ಗುರುವಾರ, 15 ಆಗಸ್ಟ್ 2024 (15:30 IST)
ಬೆಂಗಳೂರು: ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್‌ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಎಚ್‌ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಲೋಕಸೇವಾ ಆಯೋಗ ಈ ತಿಂಗಳ 27ರಂದು 2023-24ರ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್‌ಸಿಯು ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕೇಂದ್ರ

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್‌ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್‌ ಕರ್ನಾಟಕ ಸರಕಾರ ಹಾಗೂ #ಕೆಪಿಎಸ್‌ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ