ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿಗೂ ಏನು ಸಂಬಂಧ: ಪ್ರಹ್ಲಾದ ಜೋಶಿ ಲೇವಡಿ

Sampriya

ಸೋಮವಾರ, 23 ಡಿಸೆಂಬರ್ 2024 (15:56 IST)
Photo Courtesy X
ಹುಬ್ಬಳ್ಳಿ: ಈಗಿನ ಕಾಂಗ್ರೆಸ್‌ಗೂ, ಮಹಾತ್ಮ ಗಾಂಧೀಜಿಗೂ ಏನು ಸಂಬಂಧ. ಈಗಿನದು ನಕಲಿ ಕಾಂಗ್ರೆಸ್‌, ಹಳೇ ಕಾಂಗ್ರೆಸ್‌ ತುಂಡು ತುಂಡಾಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.

ಮಾಧ್ಯಮಗಳಿಗೆ ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಶತಮಾನೋತ್ಸವದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು. ಅದು ಕಳ್ಳಕಾಕರ ಗುಂಪು. ಇವರ‍್ಯಾರು ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್‌ನ ವಾರಸುದಾರಲ್ಲ. ನಕಲಿ‌ ಕಾಂಗ್ರೆಸ್‌ಗೆ ಸರ್ಕಾರಿ ದುಡ್ಡು ಯಾಕೆ ಹಾಕುತ್ತೀರ ಎಂದು ಪ್ರಶ್ನೆ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಸಿ.ಟಿ. ಅವರನ್ನು ಕಾರಿನಲ್ಲಿ ಸುತ್ತಾಡಿಸಿದ್ದು ತನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ನೀಡುತ್ತಾರೆ. ಅಂದರೆ, ಗೃಹ ಸಚಿವರನ್ನೇ ಕತ್ತಲಲ್ಲಿ ಇಟ್ಟು ಪೊಲೀಸರು ಹೀಗೆ ಮಾಡಿದ್ದಾರಾ  ಎಂದು ಪ್ರಶ್ನೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಸಹ ಪೊಲೀಸರು ತಪ್ಪು ಮಾಡಿದ್ದಾರೆ ಎಂದಿದ್ದಾರೆ. ಹಾಗಾದರೆ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಇದರ ಹಿಂದಿನ ಸೂತ್ರಧಾರರು ಯಾರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಬೇಕೆಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ