ರಸ್ತೆಗೆ ಮೈಸೂರಿನ ಸುಪುತ್ರ ಸಿದ್ದರಾಮಯ್ಯ ಹೆಸರಿಡುವುದರಲ್ಲಿ ತಪ್ಪೇನಿದೆ: ಪ್ರತಾಪ ಸಿಂಹ

Sampriya

ಬುಧವಾರ, 25 ಡಿಸೆಂಬರ್ 2024 (19:36 IST)
Photo Courtesy X
ಮೈಸೂರು: ಇಲ್ಲಿನ ಕೆಆರ್‌ಎಸ್ ರಸ್ತೆಗೆ 'ಸಿದ್ದರಾಮಯ್ಯ ಆರೋಗ್ಯ ಮಾರ್ಗ' ಎಂದು ನಾಮಕರಣ ಮಾಡುವುದರಲ್ಲಿ ತಪ್ಪೇನಿದೆ ಎಂದು ಸಿಎಂ ಪರ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಇಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆಯೇ ಹೊರತು, ರಸ್ತೆಗೆ ನಾಮಕರಣ ವಿಚಾರದಲ್ಲಿ ಅವರನ್ನು ವಿರೋಧ ಮಾಡುವುದಿಲ್ಲ ಎಂದರು.

ಎರಡು ಬಾರಿ ಸ್ಪಪ್ಟ ಬಹುಮತದೊಂದಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರದ್ದು ಮೈಸೂರಿಗೆ ಕೊಡುಗೆ ಅಪಾರವಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಿಸಿದ್ದು, ಸೂಪರ್ ಸ್ಪೆಷಲಾಟಿ ಆಸ್ಪತ್ರೆ ಕಟ್ಟಿಸಿದ್ದು ಹಾಗೂ ರಾಜಪಥ ಮಾಡಿಸಿದ್ದು ಅವರೇ. 40 ವರ್ಷಗಳಿಂದ ವಿಧಾನಸಭೆಗೆ ಹೋಗಿದ್ದಾರೆ. ಹೀಗಿರುವಾಗ ಅವರ ಹೆಸರಿಡುವ ವಿಚಾರದಲ್ಲಿ ತಕಾರರು ಎತ್ತಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದರು.

ಸಾಧಕರು ಬಿಜೆಪಿಯಲ್ಲಿ ಮಾತ್ರವಲ್ಲ. ಎಲ್ಲಾ ಪಕ್ಷದಲ್ಲೂ ಇದ್ದಾರೆ. ಸಿದ್ದರಾಮಯ್ಯ ಹೆಸರಿಡುವ ವಿಚಾರದಲ್ಲಿ ಪಕ್ಷ ನೋಡಬೇಡಿ; ಸಣ್ಣತನ ತೋರಿಸಬೇಡಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ