ಸರ್ಕಾರ ಪತನದ ಕುರಿತು ಉಮೇಶ್ ಕತ್ತಿ ಹೇಳಿಕೆಗೆ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಗುರುವಾರ, 27 ಡಿಸೆಂಬರ್ 2018 (11:40 IST)
ವಿಜಯಪುರ : ಸಮ್ಮಿಶ್ರ ಸರ್ಕಾರ ಪತನದ  ಕುರಿತು ಶಾಸಕ ಉಮೇಶ್ ಕತ್ತಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ‘ಶಾಸಕ ಉಮೇಶ್ ಕತ್ತಿ ಈ ರೀತಿ ಹೇಳಿಕೆ ನೀಡಬಾರದಿತ್ತು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ,’24 ಗಂಟೆಯೊಳಗೆ ಸಮ್ಮಿಶ್ರ ಸರ್ಕಾರ ಉರಳಲಿದೆ. ಬಳಿಕ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ  ಯಡಿಯೂರಪ್ಪ ಅವರು,’ ಸರ್ಕಾರ ಪತನದ ಕುರಿತು ಶಾಸಕ ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು. ನಾವು ಒಟ್ಟು 104 ಜನ ಶಾಸಕರಿದ್ದೇವೆ. ಸರ್ಕಾರ ತಾನಾಗಿಯೇ ಪತನವಾದರೇ ಮಾತ್ರ, ಸರ್ಕಾರ ರಚನೆ ಮಾಡುವ ವಿಚಾರ ಮಾಡಬಹುದು. ಸಚಿವರು ಖಾತೆಗಾಗಿ ಕಿತ್ತಾಟ ನಡೆಸುತ್ತಿರುವುದು ಸರಿಯಲ್ಲ’ ಎಂದು ಹೇಳಿದ್ದಾರೆ.


ಬೆಳಗಾವಿ ಅಧಿವೇಶನದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಷ್ಕ್ರೀಯವಾಗಿವೆ. ಇನ್ನಾದರೂ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ. ಹಾಗೇ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಿರುದ್ಧ ದೇವೇಗೌಡ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ ನಮಗೆ ಸಂಬಂಧವಿಲ್ಲ. ನಾವು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ