ಡಿಕೆಶಿ ವಿರುದ್ಧ ಯಾವ ಲಾಭಕ್ಕೆ ಸಿಬಿಐ ದಾಳಿ ನಡೆದಿದೆ?

ಮಂಗಳವಾರ, 6 ಅಕ್ಟೋಬರ್ 2020 (18:19 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಚೇರಿ, ನಿವಾಸ ಮತ್ತಿತರ ಕಡೆಗಳಲ್ಲಿ ನಡೆದಿರುವ ಸಿಬಿಐ ದಾಳಿ ಬಗ್ಗೆ ವಿರೋಧಗಳು ವ್ಯಕ್ತವಾಗತೊಡಗಿವೆ.

ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ಸಿಬಿಐ ಮೂಲಕ ದಾಳಿ ನಡೆಸಲಾಗಿದ್ದು, ವಿರೋಧ ಪಕ್ಷಗಳ ನಾಯಕರ ಮೇಲೆ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಆರೋಪಿಸಿದ್ದಾರೆ.

ಈ ರೀತಿಯ ದಾಳಿ ಎದುರಿಸುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು, ಇಂಥ ಘಟನೆಗಳಿಂದ ವಿಚಲಿತರಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯ ದಾಳಿ ನಡೆದಿರುವುದು ಸ್ಪಷ್ಟ ಎಂದು ಮಾನೆ ಹರಿಹಾಯ್ದಿದ್ದಾರೆ.

ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ರಾಜ್ಯದ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ