ಬೆಂಗಳೂರು : ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ಮಾಡಿಕೊಂಡರಿಗೆ ಅಲ್ಲಿನ ಸ್ಥಳೀಯರು ತಕ್ಕ ಪಾಠ ಕಲಿಸಿದ್ದಾರೆ.
ಲಾಕ್ ಡೌನ್ ಇದ್ದರೂ ಯಲಹಂಕ ಬಳಿಯ ರಮಡಾ ರೆಸಾರ್ಟ್ ನಲ್ಲಿ ಮದುವೆ ಮಾಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗದೆ. ಇದನ್ನು ಗಮನಿಸಿದ ಸ್ಥಳೀಯರು ತಡರಾತ್ರಿ ರೆಸಾರ್ಟ್ ಗೆ ಮುತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.
ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬ ಸ್ಥಳೀಯರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಕಾರಿನ ಗಾಜು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.