ಸರ್ಕಾರ ಏನೇ ಮಾಡಿದರೂ ಕಳ್ಳನ ಹೆಂಡತಿ ಡ್ಯಾಶ್ ಡ್ಯಾಶ್: ಸಿ.ಟಿ. ರವಿ ವ್ಯಂಗ್ಯ

Sampriya

ಸೋಮವಾರ, 9 ಸೆಪ್ಟಂಬರ್ 2024 (14:27 IST)
Photo Courtesy X
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಳಜಗಳ ಶುರುವಾರಿಗೆ. ದೀಪಾವಳಿ ಹಬ್ಬದ ಒಳಗೆ ಸರ್ಕಾರ ಢಮಾರ್ ಆಗುವುದು ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸರ್ಕಾರ ಏನೇ ಮಾಡಿದರೂ ಕಳ್ಳನ ಹೆಂಡತಿ ಡ್ಯಾಶ್ ಡ್ಯಾಶ್' ಎಂದು ವ್ಯಂಗ್ಯವಾಡಿದರು.

ಏನೇ ಮುಚ್ವಿಟ್ಟರೂ ಇದು ಭ್ರಷ್ಟಾಚಾರದ ಸರ್ಕಾರ. ಸಿದ್ದರಾಮಯ್ಯರ ವಿರುದ್ಧ ಇರುವ ಮುಡಾ ಹಗರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಅಲ್ಲಿ ಮಾತ್ರ ಏನೂ ಮುಚ್ಚಿಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಎಲ್ಲವೂ ಸಾಬೀತಾಗುತ್ತದೆ. ಅದಕ್ಕೂ ಮುನ್ನ ಸಿದ್ದರಾಯಯ್ಯ ರಾಜೀನಾಮೆ ನೀಡುವುದು ಸೂಕ್ತ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ