ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ಏನು ಪ್ರಯೋಜನ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬುಧವಾರ, 2 ನವೆಂಬರ್ 2016 (14:21 IST)
ಟಿಪ್ಪು ಸುಲ್ತಾನ್ ಶಾಂತಿಯಿಂದ ವಿರಮಿಸಲಿ. ಟಿಪ್ಪು ಜಯಂತಿ ಆಚರಣೆಯಿಂದ ಏನು ಪ್ರಯೋಜನ ಎಂದು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಸರಕಾರವನ್ನು ಪ್ರಶ್ನಿಸಿದ್ದಾರೆ.
 
ರಾಜ್ಯ ಸರಕಾರದ ಟಿಪ್ಪು ಜಯಂತಿ ಆಚರಣೆಯನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
 
ಟಿಪ್ಪು ಜಯಂತಿ ಆಚರಣೆಯ ಹಿಂದಿನ ಉದ್ದೇಶವೇನು. ಅದರಿಂದ ಯಾವ ಸಾಧನೆಯಾಗುತ್ತದೆ. ಇದರಿಂದ ಅಡ್ಡಿ ಆತಂಕಗಳಿವೆಯೇ ಹೊರತು ಯಾವುದು ಸಾಧಿಸಿದಂತಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಟಿಪ್ಪು ಸುಲ್ತಾನ್ ಬ್ರಿಟಿಷರೊಂದಿಗೆ ಯುದ್ಧ ಮಾಡಿದಕ್ಕೆ ಸ್ವಾತಂತ್ರ್ಯ ಹೋರಾಟಗಾರನಾದರೆ, ಬ್ರಿಟಿಷರೊಂದಿಗೆ ನಿಜಾಮರು ಕೂಡಾ ಯುದ್ಧ ಮಾಡಿದ್ದಾರೆ. ಅಂದರೆ, ನಿಜಾಮರೂ ಸ್ವಾತಂತ್ರ್ಯ ಹೋರಾಟಗಾರರೇ ಎನ್ನುವ ಪ್ರಶ್ನೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸರಕಾರದ ಮುಂದಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ