ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ
ಹೊಸಪೇಟೆಯಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಆಯೋಜಿಸಿದೆ. ಎರಡು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ನಾವು ಸಾಧನೆ ಮಾಡಿದ್ದೇವೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ಇಂದು ಹೊಸಪೇಟೆಯಲ್ಲಿ ಭರ್ಜರಿ ಸಮಾವೇಶ ಮಾಡಲಾಗುತ್ತಿದೆ.
ಒಂದೆಡೆ ಗ್ಯಾರಂಟಿ ಯೋಜನೆಗಳೇ ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಾಕಿಯಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಮಳೆ ನೀರಿನಿಂದ ಅವ್ಯವಸ್ಥೆಯ ಆಗರವಾಗಿದೆ. ಈ ಸಂದರ್ಭದಲ್ಲಿ ಸಾಧನೆ ಮಾಡಿದ್ದೇವೆ ಎಂಬ ಹೆಸರಿನಲ್ಲಿ ಸಮಾವೇಶ ಮಾಡುವುದಕ್ಕೆ ಅರ್ಥವಿದೆಯೇ ಎಂದು ಬಿಜೆಪಿ ನಾಯಕರು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.