ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಡುವ ಮುನ್ಸೂಚನೆಗಳು ಕಂಡು ಬರುತ್ತಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ನಾಲ್ಕು ವಾರಗಳ ನಂತರ ಬಿಬಿಎಂಪಿ ಚುನಾವಣೆ ವಿಚಾರಣೆಯನ್ನು ಕೈಗೆತ್ತಿಕೊಂಡು ಅಂತಿಮ ತೀರ್ಪು ನೀಡುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬರುವ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ.
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾಕೊಹ್ಲಿ ನೇತೃತ್ವದ ತ್ರಿಸದಸ್ಯ ಪೀಠ ನಿನ್ನೆ ಬಿಬಿಎಂಪಿ ಚುನಾವಣೆ ಸಂಬಂಧ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ಪರ ವಕೀಲರು ಹಾಗೂ ಪ್ರತಿವಾದಿಗಳಾದ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್ ಮತ್ತು ಅಬ್ದುಲ್ ವಾಜಿದ್ ಪರ ವಕೀಲರನ್ನು ವೀಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿತ್ತು.