ಬೆಂಗಳೂರು : ಚುನಾವಣಾ ವರ್ಷದಲ್ಲಿ ರಾಜ್ಯ ಕಾಂಗ್ರೆಸ್ನ ಪರಿಸ್ಥಿತಿ ಪಂಜಾಬ್ ಕಾಂಗ್ರೆಸ್ನ ಸ್ಥಿತಿಯಂತಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೇಗುದಿ ಹೆಚ್ಚಾಗುತ್ತಿದೆ. ಸಿದ್ದರಾಮೋತ್ಸವದ ವೇದಿಕೆಯಲ್ಲಿ ಸಿದ್ದು-ಡಿಕೆ ದೋಸ್ತಿ ತೋರಿಸಿದ್ದರು. ಈಗ ರಾಹುಲ್ ಗಾಂಧಿಯ ಭಾರತ್ ಜೋಡೋ ಪಾದಯಾತ್ರೆ ವಿಚಾರದಲ್ಲಿ ದಂಗಲ್ಗೆ ಕಾರಣವಾಗುತ್ತಿದೆ.
ಕಾಂಗ್ರೆಸ್ನಲ್ಲಿ ನಾನೇ ಬಾಸ್ ಎನ್ನುವ ರೀತಿ ವರ್ತಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ಬಣ ಮುಗಿಬಿದ್ದಿದೆ. ಯಾರೇ ಒಬ್ಬರು ನನ್ನಿಂದ ಟಿಕೆಟ್ ಘೋಷಣೆ ಅಂತ ಹೇಳಿದರೆ ಅದು ಕಾಂಗ್ರೆಸ್ನಲ್ಲಿ ಸಾಧ್ಯವಿಲ್ಲ.
ಒಬ್ಬರ ಕೈಯಲ್ಲಿ ಇದೆಲ್ಲವೂ ಇಲ್ಲ ಎಂದು ದಿನೇಶ್ ಗುಂಡೂರಾವ್ ತಿರುಗೇಟು ಕೊಟ್ಟಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು. ಸಿಎಂ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ.