ಪತ್ನಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ ಪತಿ ರಾಕೇಶ್ ಪರಿಸ್ಥಿತಿ ಈಗ ಏನಾಗಿದೆ ಗೊತ್ತಾ

Krishnaveni K

ಶುಕ್ರವಾರ, 28 ಮಾರ್ಚ್ 2025 (15:21 IST)
Photo Credit: X
ಬೆಂಗಳೂರು: ಪತ್ನಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ ರಾಕೇಶ್ ಈಗ ಎಲ್ಲಿದ್ದಾನೆ, ಆತನ ಪರಿಸ್ಥಿತಿ ಏನಾಗಿದೆ? ಇಲ್ಲಿದೆ ವಿವರ.

ಬೆಂಗಳೂರಿನ ಹುಳಿಮಾವು ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರಾಕೇಶ್ ತನ್ನ ಪತ್ನಿ ಗೌರಿಯನ್ನು ಕೊಲೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಪರಾರಿಯಾಗಿದ್ದ. ಪತ್ನಿಯನ್ನು ಕೊಲೆ ಮಾಡಿದ ಎರಡು ದಿನಗಳ ಬಳಿಕ ಆಕೆಯ ತವರು ಮನೆಯವರಿಗೆ ವಿಷಯ ಹೇಳಿ ಪರಾರಿಯಾಗಿದ್ದ.

ತಕ್ಷಣವೇ ಪೊಲೀಸರಿಗೆ ಗೌರಿ ಮನೆಯವರು ಮಾಹಿತಿ ನೀಡಿದ್ದರು. ಗೌರಿ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಪರಾರಿಯಾಗಿದ್ದ ಪತಿ ರಾಕೇಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.

ಈತನ ಬಗ್ಗೆ ಈಗ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ. ಕೃತ್ಯ ನಡೆಸಿದ ಬಳಿಕ ಆತ ತನ್ನ ತವರು ಮಹಾರಾಷ್ಟ್ರಕ್ಕೆ ತೆರಳಿದ್ದ. ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಬಳಿ ಅಸ್ವಸ್ಥನಾಗಿ ಬಿದ್ದಿದ್ದ. ಈತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಮೂಲಗಳ ಪ್ರಕಾರ ಆತ ವಿಷ ಸೇವನೆ ಮಾಡಿದ್ದ ಎನ್ನಲಾಗಿದೆ. ಇದೀಗ ಮುಂಬೈನಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ಪೊಲೀಸರು ಈಗ ಮುಂಬೈಗೆ ತೆರಳಿ ಆತನನ್ನು ವಶಕ್ಕೆ ಪಡೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ