ವೈಭವದ ದಸರಾ ದರ್ಬಾರ್ ನಡೆದದ್ದೆಲ್ಲಿ?

ಬುಧವಾರ, 31 ಜುಲೈ 2019 (16:02 IST)
ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ಸಡಗರದಿಂದ ನೆರವೇರಿದೆ.

ಮಂಡ್ಯ ಜಿಲ್ಲೆ ಕೊರಟಿಕೆರೆ ಗ್ರಾಮದಲ್ಲಿ 4 ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಬಾರ್ ಮೆರವಣಿಗೆ ನಡೆದಿದೆ.  

ಮಂಡ್ಯದ ಕೃಷ್ಣರಾಜಪೇಟೆ ತಾಲ್ಲೂಕಿನ ಕೊರಟಿಕೆರೆ ಗ್ರಾಮದಲ್ಲಿ 4ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ಸಪ್ತಮಾತ್ರಿಕಾ ಹೋಮ, ತಾಯಿ ರಾಮಲಿಂಗ ಚೌಡೇಶ್ವರಿ ಅಮ್ಮನವರ ಆನೆಯ ಅಂಬಾರಿಯ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದಿಂದ ಆಗಮಿಸಿದ್ದ ಆನೆಯು ತಾಯಿಯ ಉತ್ಸವ ಮೂರ್ತಿಯನ್ನು ಗ್ರಾಮದಲ್ಲಿ ಪ್ರದಕ್ಷಿಣೆ ಹಾಕಿ ಭಕ್ತಿಯ ಪರಾಕಾಷ್ಠೆಯನ್ನು ಪ್ರದರ್ಶನ ಮಾಡಿತು.

ನಡೆಮುಡಿಯ ಮೇಲೆ ಬಾಲಕಿಯರು ಶ್ರೀ ಚಾಮುಂಡೇಶ್ವರಿ ದೇವಿಯ ಕರಗದ ಕಳಶಗಳನ್ನು ತಲೆಯ ಮೇಲೆ ಹೊತ್ತು ಮೆರವಣಿಗೆ ಮಾಡಿದರು. ಉಧ್ಯಮಿ ಬಿ.ರಾಜಶೇಖರ್ ದಂಪತಿ ಅಂಬಾರಿಯನ್ನು ಹೊತ್ತಿದ್ದ ಆನೆ ಗೌರಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದ್ರು.

ನಾಡಿನ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ಕೃತಾರ್ಥರಾದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ