ಗುಂಡಿ ಬಿದ್ದ ರಸ್ತೆಗಳಿಗೆ ವೈಟ್ ಟ್ಯಾಪಿಂಗ್: ಸಚಿವ ಜಾರ್ಜ್
ಬೆಂಗಳೂರು: ನಗರದಲ್ಲಿ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಮಾಧ್ಯಮದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ವಿರುದ್ಧ ಸಚಿವ ಕೆ.ಜೆ.ಜಾರ್ಜ್ ಕಿಡಿಕಾರಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ಸೇರಿ ಹಲವು ರಸ್ತೆಗಳು ಜಲಾವೃತವಾಗಿದ್ದವು. ಪರಿಣಾಮ ಹಲವು ರಸ್ತೆಗಳು ದುರಸ್ತಿಯಾಗಿದ್ದು. ಹಲವು ಕಡೆ ಗುಂಡಿಗಳು ಬಿದ್ದಿದ್ದು, ಸವಾರರು ಓಡಾಡಲು ಪರದಾಡುವಂತಾಗಿದೆ.