ಮುಂದೆ ರಾಜ್ಯದಲ್ಲಿ ಬಿಜೆಪಿ ಬಿಟ್ಟು ಬೇರೆ ಯಾರು ಅಧಿಕಾರ ನಡೆಸಲು ಸಾಧ್ಯವಿಲ್ಲ: ಸದಾನಂದಗೌಡ

ಶನಿವಾರ, 14 ಜನವರಿ 2017 (17:02 IST)
ಪರಿಷತ್ ವಿಪಕ್ಷ ನಾಯಕ ಸ್ಥಾನ ಬದಲಾವಣೆ ಮಾಡುವ ಸನ್ನಿವೇಶವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಶಿವಮೊಗ್ಗ ಶಿಲ್ಲೆಯ ತೀರ್ಥಹಳ್ಳಿಯ ಬೆಜ್ಜುವಳ್ಳಿ ಗ್ರಾಮದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಈ ಗೊಂದಲಗಳನ್ನು ನಿವಾರಿಸಲು ರಾಷ್ಟ್ರೀಯ ನಾಯಕರು ಸಮರ್ಥರಿದ್ದಾರೆ ಎಂದರು.
 
ರಾಜ್ಯ ಬಿಜೆಪಿ ಘಟಕದಲ್ಲಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರಿದ್ದಾರೆ. ಅಧಿಕಾರದ ಸ್ಥಾನಗಳು ಕಡಿಮೆ ಇದ್ದು, ಆಕಾಂಕ್ಷಿಗಳ ಪಟ್ಟಿ ಅಧಿಕವಾಗಿದೆ ಎಂದು ಅಭಿಪ್ರಾಯಪಟ್ಟರು.
 
ಮುಂದೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸಬೇಕು. ನಮ್ಮನ್ನು ಬಿಟ್ಟು ಬೇರೆ ಯಾವ ಪಕ್ಷವೂ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ