ದುಬೈನಿಂದ ಬಂದಿದ್ದ ಎರಡನೆ ಕೊರೊನಾ ಸೋಂಕಿತ ವ್ಯಕ್ತಿ ಏನಾದ?

ಬುಧವಾರ, 15 ಏಪ್ರಿಲ್ 2020 (15:52 IST)
ಎರಡನೇ ಕೊರೊನಾ ಸೋಂಕಿತ ವ್ಯಕ್ತಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾನೆ.

ಉಡುಪಿ ಜಿಲ್ಲೆಯ ಎರಡನೇ ಕೊರೊನಾ ಸೋಂಕಿತ ಮಣಿಪುರದ 35 ವರ್ಷದ ವ್ಯಕ್ತಿ ಇದೀಗ ಸಂಪೂರ್ಣ ಗುಣಮುಖನಾಗಿದ್ದಾರೆ. ಡಾ.ಟಿಎಂಎಪೈ ಕೋವಿಡ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ವ್ಯಕ್ತಿಯ ಗಂಟಲಿನ ದ್ರವವನ್ನ ಎರಡು ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಎರಡು ಮಾದರಿಗಳಲ್ಲಿ ನೆಗಟೀವ್ ವರದಿ ಬಂದಿದ್ದು, ಇದೀಗ ಸೋಂಕಿನಿಂದ ಚೇತರಿಸಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈತ ಮಾರ್ಚ 17 ರಂದು ದುಬೈನಿಂದ ಉಡುಪಿಗೆ ಬಂದಿದ್ದು, ಬಳಿಕ ಈತನಲ್ಲಿ ಕೊರೊನಾದ ಲಕ್ಷಣ ಕಾಣಿಸಿಕೊಂಡಿತ್ತು. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಮೂರು ಪ್ರಕರಣಗಳು ಪತ್ತೆಯಾಗಿದ್ದು, ಈತ ಸೇರಿದಂತೆ ಇದೀಗ ಒಟ್ಟು ಇಬ್ಬರು ಡಿಸ್ಟಾರ್ಜ್ ಆಗಿರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ