ಸರ್ಕಾರವನ್ನು ಬೆದರಿಸಲು, ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ ಎಂದು ಡಿಕೆಶಿ ಎಚ್ಚರಿಸಿದ್ದು ಯಾರಿಗೆ ಗೊತ್ತಾ

Sampriya

ಗುರುವಾರ, 18 ಸೆಪ್ಟಂಬರ್ 2025 (18:17 IST)
ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಆದರೆ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಉದ್ಯಮಿಗಳ ಬೆಂಗಳೂರು ತೊರೆಯುವ ಟ್ವೀಟ್ ಕುರಿತು ಅವರು ಖಡಕ್‌ ಪ್ರತಿಕ್ರಿಯೆ ನೋಡಿದರು. ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರವಾಗಿವೆ.  ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು ಎಂದು ತಿಳಿಸಿದ್ದಾರೆ.

ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

‌ಬೆಂಗಳೂರು ನೀಡುವ ಸೌಲಭ್ಯಗಳು ಮತ್ತು ಪ್ರತಿಭೆಗಳಿಂದ ತೃಪ್ತರಾಗದಿದ್ದರೆ ಯಾರಾದರೂ ಸ್ಥಳಾಂತರಗೊಳ್ಳಲು ಸ್ವತಂತ್ರರು. ಆದರೆ, ಅವರು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡುವುದು ಕೆಲಸ ಮಾಡುವುದಿಲ್ಲ. ನಾವು ರಾಜ್ಯದ ಜನರಿಗೆ ಸೇವೆ ಸಲ್ಲಿಸಬೇಕು. ಯಾರೂ ಬೆಂಗಳೂರಿನಿಂದ ಹೊರಹೋಗುವುದಿಲ್ಲ ಎಂದು ಸವಾಲು ಹಾಕಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ