ಶಾಸಕ ಪ್ರೀತಂಗೌಡಗೆ ರಕ್ಷಣೆ ನೀಡಬೇಕೆಂದವರಾರು?

ಗುರುವಾರ, 14 ಫೆಬ್ರವರಿ 2019 (14:01 IST)
ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಮನೆ ಮೇಲೆ ಕಲ್ಲು ತೂರಾಟ ದಿನದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಶಾಸಕನ ಪರ ಬಿಜೆಪಿ ನಿಂತಿದ್ದರೆ, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೈತ್ರಿ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಜೆಡಿಎಸ್ ನಾಯಕರು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಬಿಜೆಪಿಗರು ಹೊರಹಾಕುತ್ತಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಘೋಷಣೆ ಕೂಗಲಾಯಿತು. ಶಾಸಕ
ಪ್ರೀತಂ ಗೌಡಗೆ ರಕ್ಷಣೆ ನೀಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ