ಬೆಂಗಳೂರು :ದಕ್ಷಿಣ ವಿಭಾಗದ ಸಂಚಾರಿ ಡಿಸಿಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 84 ಬೈಕ್ ಮತ್ತು ಒಂದು ಕಾರ್ ನ್ನು ವಶಕ್ಕೆ ಪಡೆಯಲಾಗಿತ್ತು. ವಶಪಡಿಸಿಕೊಂಡ ವಾಹನಗಳ ಮೇಲೆ ಒಟ್ಟು 10,210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಸದ್ಯ ಎಲ್ಲಾ ವಾಹನಗಳನ್ನು ಸೀಜ್ ಮಾಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಐವತ್ತು ಸಾವಿರ ರೂ. ಗಳಿಗೂ ಹೆಚ್ಚು ಮೊತ್ತದ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡದ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಬೆಂಗಳೂರು ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆ ರೀತಿಯ ಸುಮಾರು 85 ವಾಹನಗಳ ವಿರುದ್ದ ಕಾರ್ಯಾಚರಣೆ ನಡೆಸಿ 1.07 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ದಂಡವನ್ನು ವಸೂಲಿ ಮಾಡಿದ್ದಾರೆ.
ಕೇವಲ ಮೂರು ದಿನಗಳ ಹಿಂದಷ್ಟೇ 50 ಸಾವಿರಕ್ಕೂ ಹೆಚ್ಚು ಬಾಕಿ ಇರಿಸಿಕೊಂಡಿರುವ ವಾಹನ ಸವಾರರ ಮನೆಗೆ ತೆರಳಿ ದಂಡ ವಸೂಲಿ ಮಾಡುವುದಾಗಿ ಪೊಲೀಸ್ ಇಲಾಖೆ ಹೇಳಿತ್ತು.