ಕರ್ನಾಟಕದಲ್ಲಿ ಮಾತ್ರ ಯಾಕೆ ಎಸಿಬಿ ರದ್ದು ಮಾಡಿದ್ರು..? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದ ಒಟ್ಟು 16 ರಾಜ್ಯಗಳಲ್ಲಿ ಇದೆ. ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರ ಕಸಿಯಲಾಗಿದೆ ಎಂದು ಹೇಳುವುದು ಸರಿಯಲ್ಲ.ಅಡ್ವಕೇಟ್ ಜನರಲ್ ಅವರು ಎಸಿಬಿ ರಚನೆ ಸರಿ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ, ಇದಕ್ಕೆ ವಿರುದ್ಧವಾಗಿ ಸರಕಾರ ಹೇಳಿಕೆ ನೀಡುತ್ತಿದ್ದು, ಕೋರ್ಟ್ ನಲ್ಲಿ ಒಂದು ಹೊರಗಡೆ ಒಂದು ಭಿನ್ನ ನಿಲುವು ಯಾಕೆ..ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಕುರಿತಾಗಿ ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಉದ್ದೇಶಪೂರ್ವಕವಾಗಿ ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರವನ್ನು ಕಿತ್ತುಕೊಂಡರು ಎಂದು ಜನರಿಗೆ ತಪ್ಪು ಮಾಹಿತಿ ನೀಡುವುದು ಯಾಕೆ? ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಯಾಕೆ ಇನ್ನು ಎಸಿಬಿಯನ್ನು ರದ್ದು ಮಾಡಿಲ್ಲ, ಎಂದು ಪ್ರಶ್ನಿಸಿದರು. ನನ್ನ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ್ದ ಅನೇಕ ದೂರುಗಳು ಆಧಾರ ರಹಿತವಾದವು ಎಂದು ಲೋಕಾಯುಕ್ತದವರೇ ರದ್ದು ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು