ಬ್ರಿಗೇಡ್‌ಗೆ ವಿರೋಧವೇಕೆಂದು ಯಡಿಯೂರಪ್ಪ ಸ್ಪಷ್ಟಪಡಿಸಲಿ: ಈಶ್ವರಪ್ಪ ಸವಾಲ್

ಬುಧವಾರ, 25 ಜನವರಿ 2017 (12:00 IST)
ರಾಯಣ್ಣ ಬ್ರಿಗೇಡ್‌ನಿಂದ ಹಿಂದುಳಿದ ವರ್ಗದವರು ಹಾಗೂ ದಲಿತರು ಜಾಗೃತಿಯಾಗುತ್ತಿದ್ದು, ಇದರಿಂದ ಕಾಂಗ್ರೆಸ್‌ನವರಿಗೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಸಹಿಸಲಾಗುತ್ತಿಲ್ಲ. ಬ್ರಿಗೇಡ್‌ಗೆ ವಿರೋಧ ಏಕೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಗೇಡ್‌ಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇವಲ 28 ಜನರು ತಮ್ಮ ವಿರುದ್ಧ ಸಹಿಸಂಗ್ರಹ ಮಾಡಿದ್ದು, ಶಿಸ್ತಿನ ಪಕ್ಷವಾಗಿರುವ ಬಿಜೆಪಿಯಲ್ಲಿ ಇಂತಹ ವ್ಯವಸ್ಥೆಯೇ ಇಲ್ಲ. ಸಹಿ ಸಂಗ್ರಹಕ್ಕೆ ಬೆಲೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಮುರಳೀಧರರಾವ್ ಸ್ಪಷ್ಟಪಡಿಸಿದ್ದಾರೆ ಎಂದರು. 
 
 
ಕೂಡಲ ಸಂಗಮದಲ್ಲಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆಯುತ್ತೆ. ಈ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿನವನ್ನು ಆಚರಿಸಲಾಗುತ್ತದೆ. ರಾಯಣ್ಣನ ಬಲಿದಾನ ಸಮಾವೇಶಕ್ಕೆ ಯಾರನ್ನು ಆಹ್ವಾನಿಸಿಲ್ಲ. ಯಾರು ಬೇಕಾದರೂ ಸಮಾವೇಶದಲ್ಲಿ ಪಾಲ್ಗೊಳ್ಳಬಹುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ