ನಟಿ ಭಾವನಾ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಮನೆಗೆ ಬಂದಿದ್ದೇಕೆ?!

ಶುಕ್ರವಾರ, 4 ಮೇ 2018 (10:49 IST)
ಬೆಂಗಳೂರು: ಟಿಕೆಟ್ ಕೈ ತಪ್ಪಿದ ಅಸಮಾಧಾನದ ಇಫೆಕ್ಟ್ ಇನ್ನೂ ರಾಜಕೀಯ ನಾಯಕರಲ್ಲಿ ಇನ್ನೂ ಕೊನೆಯಾಗಿಲ್ಲ. ಇದೀಗ ನಟಿ ಭಾವನಾ ಬಿಎಸ್ ವೈ ಮನೆಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಪರ ಸಕ್ರಿಯರಾಗಿ ಪ್ರಚಾರ ನಡೆಸುತ್ತಿದ್ದ ನಟಿ ಭಾವನಾ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದು ಭಾವನಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆಂಬ ವದಂತಿ ಹುಟ್ಟು ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ