ಗೂಗಲ್ ಪ್ಲೇ ಸ್ಟೋರ್ ನಿಂದ ಸಿಎಂ ಸಿದ್ದರಾಮಯ್ಯ ಆಪ್ ಡಿಲೀಟ್ ಮಾಡಿದ್ದೇಕೆ? ಕಾರಣ ಇಲ್ಲಿದೆ ನೋಡಿ

ಶುಕ್ರವಾರ, 30 ಮಾರ್ಚ್ 2018 (10:03 IST)
ಬೆಂಗಳೂರು: ಇತ್ತೀಚೆಗೆ ರಾಜಕೀಯ ಪಕ್ಷಗಳ ಸಾಮಾಜಿಕ ಜಾಲತಾಣದ ಲೀಕೇಜ್ ಸ್ಟೋರಿಯೇ ಹೆಚ್ಚು ಸದ್ದು ಮಾಡುತ್ತಿದೆ. ನರೇಂದ್ರ ಮೋದಿ ಆಪ್ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುತ್ತಿದೆ ಎಂಬ ಆರೋಪ ಮಾಡಿ ಕಾಂಗ್ರೆಸ್ ಕೊನೆಗೆ ತನ್ನ ಆಪ್ ನ್ನೂ ಡಿಲೀಟ್ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೂಡಾ ತಮ್ಮ ಆಪ್ ನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡಿಲೀಟ್ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ ಡಿಲೀಟ್ ಮಾಡಿದ್ದಕ್ಕೆ ಬಿಜೆಪಿ ಟೀಕೆ ಮಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಇದೆಲ್ಲಾ ಚುನಾವಣಾ ನೀತಿ ಸಂಹಿತೆಗಾಗಿ ಎಂದಿದ್ದಾರೆ.

‘ಆ ಆಪ್ ನಲ್ಲಿ ನನ್ನ ಹಲವಾರು ಫೋಟೋಗಳಿತ್ತು. ಆ ಫೋಟೋಗಳನ್ನೆಲ್ಲಾ ಡಿಲೀಟ್ ಮಾಡುವುದು ಸುಲಭವಲ್ಲ. ಅದೇ ಕಾರಣಕ್ಕೆ ಇ-ಗವರ್ನಮೆಂಟ್ ಡಿಪಾರ್ಟ್ ಮೆಂಟ್ ಗೆ ಅದನ್ನು ಡಿಲೀಟ್ ಮಾಡಲು ಹೇಳಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆಂದು ಹೀಗೆ ಮಾಡಿದೆ. ಚುನಾವಣೆ ಮುಗಿದ ಬಳಿಕ ಮತ್ತೆ ಚಾಲ್ತಿಗೆ ಬರುತ್ತದೆ’ ಎಂದು ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ