ಬಿಜೆಪಿಗೆ ಚಿಂಚನಸೂರ್ ರಾಜೀನಾಮೆ ನೀಡಿದ್ಯಾಕೆ?

ಮಂಗಳವಾರ, 21 ಮಾರ್ಚ್ 2023 (07:12 IST)
ಯಾದಗಿರಿ : ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
 
ಕೋಲಿ ಸಮುದಾಯ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳನ್ನು ಸುಲಭವಾಗಿ ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಪಾಳಯಕ್ಕೆ, ಚಿಂಚನಸೂರ್ ಬಹುದೊಡ್ಡ ಶಾಕ್ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಕೋಲಿ ಸಮಾಜದ ಏಕೈಕ ಪ್ರಭಾವಿ ಮುಖಂಡ ಸಪ್ತ ಖಾತೆಗಳ ಸಚಿವನೆಂದೇ ಖ್ಯಾತಿ ಹೊಂದಿದ್ದ ಬಾಬುರಾವ್ ಚಿಂಚನಸೂರ್ ಸೋಮವಾರ ಸಂಜೆ ಏಕಾಏಕಿ ಸಭಾಪತಿ ಬಸವರಾಜ ಹೊರಟ್ಟಿ  ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚಿಂಚನಸೂರ್ ಕಮಲಕ್ಕೆ ಕೈಕೊಟ್ಟು ʼಕೈʼ ಹಿಡಿಯಲು ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ