ಲಕ್ಷ್ಮಣ ಸವದಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಲು ಸಿಎಂ ಹೇಳಿದ್ದೇಕೆ?

ಸೋಮವಾರ, 26 ಆಗಸ್ಟ್ 2019 (13:30 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಹುದ್ದೆಗೆ ಬಾರೀ ಪೈಪೋಟಿ ಏರ್ಪಟ್ಟಿದ್ದು, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ನೀಡುವುದಕ್ಕೆ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದರೆನ್ನಲಾಗಿದೆ.




ಸಂಪುಟ ರಚನೆ, ಖಾತೆ ಹಂಚಿಕೆ ಸಂಬಂಧ ಇಂದು ಕೇಶವಕೃಪಾದಲ್ಲಿ ಆರೆಸ್ಸೆಸ್ ಮುಖಂಡರನ್ನು ಭೇಟಿ ಮಾಡಿದ ಯಡಿಯೂರಪ್ಪ, ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ ಎನ್ನಲಾಗಿದೆ.


ನಿಮಗೆ ಸಚಿವ ಸ್ಥಾನ ನೀಡಿದ್ದಕ್ಕೆ ಭಾರಿ ಅಸಮಾಧಾನ ಎದ್ದಿದೆ. ಮತ್ತೆ ಡಿಸಿಎಂ ಸ್ಥಾನ ನೀಡಿದರೆ ಮತ್ತಷ್ಟು ಅಸಮಾಧಾನ  ಭುಗಿಲೇಳುತ್ತೆ. ಆದ್ದರಿಂದ  ಡಿಸಿಎಂ ಹುದ್ದೆ ರೇಸ್ ನಿಂದ ಹಿಂದೆ ಸರಿಯಿರಿ ಎಂದು ಸಿಎಂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ