ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಲು ಕಾರಣವೇನು?

ಗುರುವಾರ, 1 ನವೆಂಬರ್ 2018 (07:34 IST)
ಬೆಂಗಳೂರು : ಟಿಪ್ಪು ಜಯಂತಿಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಿದೆ ಎಂಬುದಾಗಿ ತಿಳಿದುಬಂದಿದೆ.


ನವೆಂಬರ್ 9ರಂದು ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದರ ಬಗ್ಗೆ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದನ್ನು ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಎಂಬುವವರು  ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.


ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 31 ರ ಒಳಗೆ ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಆದರೆ ಅಕ್ಟೋಬರ್ 31ರಂದು ಪುನಃ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸದ ಹಿನ್ನಲೆಯಲ್ಲಿ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಿ, ನವೆಂಬರ್ 9ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ