ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸಿದ್ದರಾಮಯ್ಯನವರಿಗೂ ಆಗುವುದಿಲ್ಲ - ಈಶ್ವರಪ್ಪ

ಶುಕ್ರವಾರ, 27 ಡಿಸೆಂಬರ್ 2019 (10:04 IST)
ಬೆಂಗಳೂರು : ಕನಕಪುರದಲ್ಲಿ ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿ ಅತೀ ಎತ್ತರದ ಕಲ್ಲಿನ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಕಿಡಿಕಾರಿದ ಕೆ.ಎಸ್.ಈಶ್ವರಪ್ಪ , ನಮ್ಮ ಪವಿತ್ರದೇಶದಲ್ಲೇ ಹುಟ್ಟಿದ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು ತಮ್ಮ ನಾಯಕಿಯನ್ನು ಮೆಚ್ಚಿಸಲು ತಮ್ಮದೇ ಹಣದಲ್ಲಿ ವ್ಯಾಟಿಕನ್ ನಲ್ಲಿ ಹುಟ್ಟಿದ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಇನ್ನು ಇವರು ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸ್ವತಃ ಸಿದ್ದರಾಮಯ್ಯನವರಿಗೂ ಆಗುವುದಿಲ್ಲ ಎಂದು ಟ್ವೀಟರ್ ನಲ್ಲಿ ಟಾಂಗ್ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ