ಸಚಿವ ತನ್ವೀರ್ ಸೇಠ್ ಕುಸಿದು ಬಿದ್ದಿದ್ದು ಯಾಕಂತೆ…?

ಬುಧವಾರ, 24 ಜನವರಿ 2018 (16:04 IST)
ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸಚಿವ ತನ್ವೀರ್ ಸೇಠ್ ಅವರು ಮೈಸೂರು ಮೇಯರ್ ಚುನಾವಣೆ ಕಾನೂನು ಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
ಮೇಯರ್ ಚುನಾವಣೆಯಲ್ಲಿ ಗದ್ದಲ ಉಂಟಾಗಿ ಸಚಿವ  ತನ್ವೀರ್ ಸೇಠ್ ಅವರು ಕುಸಿದು ಬಿದ್ದ ಘಟನೆ ನಡೆದಿದ್ದು, ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು’ ನಮ್ಮಿಂದ ಒಬ್ಬರನ್ನ ಅಪಹರಿಸಿ ಹೈಜಾಕ್ ಮಾಡಿದ್ದಾರೆ. ಮೇಯರ್ ಚುನಾವಣೆ ಸಂಪೂರ್ಣ ಕಾನೂನು ಬಾಹಿರ. ಚುನಾವಣೆ ಪ್ರಕ್ರಿಯೆ ಪ್ರಶ್ನಿಸಿ ಕೋರ್ಟ್ ಗೆ ಹೋಗುತ್ತೇವೆ’ ಎಂದು ಹೇಳಿದ್ದಾರೆ. ಇದರಿಂದಾಗಿ ಜೆಡಿಎಸ್ ವಿರುದ್ದ ಕೋರ್ಟ್ ಗೆ ಮೊರೆ ಹೋಗಲು  ಅವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ