ಮಂಗಳೂರು : ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಭಕ್ತರ ಗುಂಪೊಂದು ದೈವ ಪಾತ್ರಿಯೋರ್ವರ ಕೂದಲನ್ನು ಕತ್ತರಿಸಿ, ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದಿದೆ.
ಲೋಕೇಶ್ ಪೂಜಾರಿ ಹಲ್ಲೆಗೊಳಗಾದವರು. ವೃತ್ತಿಯಲ್ಲಿ ದೈವದ ಪಾತ್ರಿಯಾಗಿದ್ದ ಅವರು ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಯುವಕರು ಆಕ್ರೋಶಗೊಂಡು ದೈವದ ನರ್ತನ ಸೇವೆ ನಡೆದ ಬಳಿಕ ಕೈಯಲ್ಲಿನ ಖಡಗ ತೆಗೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಬಲವಂತವಾಗಿ ಪಾತ್ರಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ.
ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದೈವ ಪಾತ್ರಿಗೆ ಅವಮಾನ ಮಾಡಿರುವುದನ್ನು ಕಂಡು ಕೆಲವು ಆಸ್ತಿಕರು ಈ ಬಗ್ಗೆ ಬಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಕೃತ್ಯ ಎಸಗಿದವರು ತಾವು ಮಾಡಿದ್ದೇ ಸರಿ ಎಂದು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.