ಚನ್ನಣ್ಣನವರ್ ವರ್ಗಾವಣೆ ಸರ್ಕಾರ ತಡೆಹಿಡಿದಿದ್ದದ್ರು ಯಾಕೆ?

ಶನಿವಾರ, 29 ಜನವರಿ 2022 (06:39 IST)
ಬೆಂಗಳೂರು  : ಐಪಿಎಸ್ ರವಿ ಡಿ ಚನ್ನಣ್ಣನವರ್ ಅವರನ್ನ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ.
 
ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಆದ್ರೆ, ಇದೀಗ  ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ.

ಪೊಲೀಸ್ ಇಲಾಖೆಯಿಂದ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದು ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ.

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ