ಚುನಾವಣೆಯಲ್ಲಿ ಸೋತಿರೋ ಸವದಿಗೆ ಹೈಕಮಾಂಡ್ ಡಿಸಿಎಂ ಪಟ್ಟ ಕೊಟ್ಟಿದ್ದೇಕೆ?

ಮಂಗಳವಾರ, 27 ಆಗಸ್ಟ್ 2019 (14:15 IST)
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಸೂಚಿಸಿದ್ದು, ಆ ಮೂಲಕ ಇದೀಗ ಮೂವರಿಗೆ ಡಿಸಿಎಂ ಹುದ್ದೆ ನೀಡಲಾಗಿದೆ.




ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ ಮಣಿದಿರುವ ಸಿಎಂ ಯಡಿಯೂರಪ್ಪ, ಗೋವಿಂದ ಕಾರಜೋಣ, ಡಾ.ಅಶ್ವತ್ಥ್ ನಾರಾಯಣ ಹಾಗೂ ಲಕ್ಷ್ಮಣ್ ಸವದಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ. ಈ ಬಗ್ಗೆ ಬಿಜೆಪಿಯಲ್ಲಿ ಬಾರೀ ವಿರೋಧ ವ್ಯಕ್ತವಾಗಿದ್ದು, ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಚುನಾವಣೆಯಲ್ಲಿ ಸೋತಿರೋ ಸವದಿಗೆ ಡಿಸಿಎಂ ಪಟ್ಟ ಕೊಡೋ ಮೂಲಕ ಜಾರಕಿಹೊಳಿ ಪಾರುಪತ್ಯಕ್ಕೆ ಬ್ರೇಕ್ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್  ಮಾಡಿದೆ ಎಂಬ ಮಾತು ಕೇಳಿಬಂದಿದೆ. ಯಾವುದೇ ಸರ್ಕಾರ ಇದ್ರೂ ಹಿಡಿತ ಹೊಂದಿದ್ದ ಜಾರಕಿಹೊಳಿ ಬ್ರದರ್ಸ್ ಮತ್ತು ಕತ್ತಿ ಬ್ರದರ್ಸ್ ಬಿಟ್ಟು ಸರ್ಕಾರ ನಡೆಸಬಹುದು ಎಂಬ ಸಂದೇಶ ನೀಡಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ