ವೀರಪ್ಪ ಮೊಯ್ಲಿ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ಬೇಡ ಎಂದು ಹೇಳಿರುವುದಕ್ಕೆ ಕಾರಣವೇನು…?
ಮಂಗಳವಾರ, 27 ಮಾರ್ಚ್ 2018 (06:47 IST)
ಬೆಂಗಳೂರು : ಇತ್ತೀಚೆಗೆ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ನಿರಾಕರಿಸಿದ ಕಾರಣವೇ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟ್ವೀಟ್ ಮಾಡಿದ್ದರು ಎಂದು ಭಾರೀ ಸುದ್ದಿಯಾಗಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಈಗ ತಮ್ಮ ಮಗ ಹರ್ಷ ಮೊಯ್ಲಿ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಿಕೊಡಬೇಡಿ ಎಂದು ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು,’ ಸ್ವತಃ ವೀರಪ್ಪ ಮೊಯ್ಲಿ ಅವರು ಸಭೆಯಲ್ಲಿ ತಮ್ಮ ಮಗನ ಟಿಕೆಟ್ ಕುರಿತ ಅರ್ಜಿಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. ಅದ್ದರಿಂದ ಅವರ ಅರ್ಜಿಯನ್ನು ಸ್ಕ್ರೀನಿಂಗ್ ಕಮಿಟಿ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ತಿಳಿಸಿದರು. ಹಾಗೇ ಈ ಸಭೆಯಲ್ಲಿ ಶಾಸಕ ಅಶೋಕ್ ಖೇಣಿ ಹೆಸರು ಸ್ಕ್ರೀನಿಂಗ್ ಕಮಿಟಿಗೆ ಶಿಫಾರಸು ಮಾಡಲಾಗಿದೆ. ಇದೀಗ ವೀರಪ್ಪ ಮೊಯ್ಲಿ ಅವರೇ ತಮ್ಮ ಮಗ ಹರ್ಷ ಮೊಯ್ಲಿಗೆ ಟಿಕೆಟ್ ಬೇಡ ಎಂದು ಹೇಳಿದರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ