ಕಾಂಗ್ರೆಸ್ ಯಾರನ್ನೂ ಕೈ ಬಿಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದೇಕೆ?

ಭಾನುವಾರ, 24 ಜೂನ್ 2018 (22:44 IST)
ಕಾಂಗ್ರೆಸ್ ಯಾರನ್ನೂ ಕೈ ಬಿಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದೇಕೆ?
ಮಂಡ್ಯ: ಸಚಿವಸ್ಥಾನ ಸಿಗದೇ ಕೆಲವು ನಾಯಕರು ಅಸಮಧಾನಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಯಾರನ್ನೂ ಕೈಬಿಡುವುದಿಲ್ಲ ಎಂದು ಆಹಾರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಅರಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ರಮೇಶ್ ಬಂಡಿಸಿದ್ದೇಗೌಡರ ಮನೆಗೆ ಭೇಟಿ ನೀಡಿದರು. ಚುನಾವಣೆಯಲ್ಲಿ ಸೋತ ಬಳಿಕ ಬಂಡಿಸಿದ್ದೇಗೌಡ, ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ ಎಂದರು.


ನನಗೆ ಸಚಿವ ಸ್ಥಾನ ಕೊಟ್ಟಿಲ್ವಾ? ಹಾಗೆಯೇ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ನಾಯಕರಿಗೂ ಅವಕಾಶ ಸಿಗುತ್ತದೆ ಅದಕ್ಕಾಗಿ ಕಾಯಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಚಲುವರಾಯಸ್ವಾಮಿ ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿಯಾಗುವ ವಿಷಯದ ಕುರಿತು ಪ್ರತಿಕ್ರಿಯಿಸಿದ್ದು, ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಿದ್ದಾರೆ. ಎಲ್ಲ ಪಕ್ಷಗಳ ನಾಯಕರ ಜತೆಗೆ ಮಾತನಾಡಿ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ನಾಮಕರಣ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಟಿಪ್ಪು ಹೆಸರನ್ನು ಹೇಳಿದರೆ ರಾಜಕೀಯದಲ್ಲಿ ಬೆಳೆಯೋದಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದರು. ಆದರೆ ಕೆಜೆಪಿಯಲ್ಲಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರು ಟಿಪ್ಪುನನ್ನು ಹೊಗಳಿದ್ದರು. ಟಿಪ್ಪುನನ್ನು ಹೊಗಳಿದ್ದರಿಂದಲೇ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಬಂದು ಸಂಸದ, ಪಕ್ಷದ ಅಧ್ಯಕ್ಷ, ಸಿಎಂ ಅಭ್ಯರ್ಥಿಯಾಗಿದ್ದರು. ಶೋಭಾ ಕರಂದ್ಲಾಜೆ ಸಂಸದರಾಗಿ ಆಯ್ಕೆಯಾದರು ಎಂದು ಟಾಂಗ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ