ಮಾಜಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ. ಹೀಗಂತ ಆರೋಪಗಳು ಕೇಳಿಬಂದಿವೆ.
ಡಿಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ. ಹೀಗಂತ ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.
ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದ್ರೆ, ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ.
ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡುವುದು ಬಾಕಿ
ಇದೆ. ತೀರ್ಪು ಪ್ರಕಟಗೊಂಡ ನಂತರ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗುವುದು. ಅನರ್ಹರು ಇನ್ನೂ ಬಿಜೆಪಿ ಸೇರಿಲ್ಲ ಎಂದರು.
ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ. ಪರಿಹಾರ ನೀಡಲು ಯಾವುದೇ ಆರ್ಥಿಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.