ರಾಹುಲ್ ಗಾಂಧಿ ಮೂರ್ಖರ ನಾಯಕ ಎಂದಿದ್ದೇಕೆ ಸಿಟಿ ರವಿ

Sampriya

ಭಾನುವಾರ, 29 ಸೆಪ್ಟಂಬರ್ 2024 (12:52 IST)
ಚಿಕ್ಕಮಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಜಯೇಂದ್ರ, ಕಟೀಲ್ ವಿರುದ್ಧ ರಾಜಕೀಯ ಪ್ರೇರಿತವಾಗಿ ಎಫ್‌ಐಆರ್ ದಾಖಲಾಗಿದೆ ಎಂದು ಮಾಜಿ ಸಚಿವ ಸಿಟಿ ರವಿ ಹೇಳಿದರು.

ಇಂದು ಚಿಕ್ಕಮಗಳೂರಿನಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾದರೆ, ಮತ್ತೊಂಡೆದೆ ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಈ ಪ್ರಕರಣಗಳು ರಾಜ್ಯದ ಎರಡೂ ಪ್ರಬಲ ಪಕ್ಷಗಳ ನಡುವೆ ವಾದ ಪ್ರತಿವಾದಕ್ಕೆ ಕಾರಣವಾಗಿದೆ.  

ಚುನಾವಣಾ ಬಾಂಡ್ ವೈಯಕ್ತಿಕವಲ್ಲ, ಪಾರ್ಲಿಮೆಂಟ್ ನಲ್ಲಿ ಪಾಸ್ ಮಾಡಿ, ಆಯೋಗದ ಗಮನಕ್ಕೂ ಬಂದಿದೆ. ರಾಜಕೀಯ ಪಕ್ಷಗಳಿಗೆ ನಿಧಿ ಸಂಗ್ರಹಿಸಲು ಪಾರದರ್ಶಕ ವ್ಯವಸ್ಥೆ ಹುಟ್ಟು ಹಾಕಿದ್ದು, ಆಯಾ ಪಕ್ಷಗಳ ಸಾಮರ್ಥ್ಯ, ಬೆಂಬಲ, ಹಿತೈಷಿಗಳ ಅನುಗುಣವಾಗಿ ಚುನಾವಣಾ ಬಾಂಡ್ ಸಿಕ್ಕಿದೆ  ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಾಮಮಂದಿರ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ನಾಚ್ ಗಾನ ಎಂದು ಹೇಳಿದ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಸಿಟಿ ರವಿ ಅವರು ರಾಹುಲ್‌ಗಾಂಧಿ ಮೂರ್ಖರ ನಾಯಕ ಎಂದು ವಾಗ್ದಾಳಿ ನಡೆಸಿದರು.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ