ಮೈತ್ರಿ ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷರು ಅಸಮಾಧಾನಗೊಂಡಿದ್ದೇಕೆ?

ಬುಧವಾರ, 1 ಮೇ 2019 (09:33 IST)
ಬೆಂಗಳೂರು : ರಾಜ್ಯದಲ್ಲಿ ಶಿಕ್ಷಣ ಸಚಿವರೇ ಇಲ್ಲದಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ.




ಬೆಂಗಳೂರಿನಲ್ಲಿ ನಡೆದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಶಿಕ್ಷಣ ಹಕ್ಕಿನ ಪಾತ್ರ ಕುರಿತ ವಿಚಾರಣ ಸಂಕಿರಣದಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದಲ್ಲಿ ಸಮಸ್ಯೆಗಳನ್ನು ಆಲಿಸಬೇಕಾದ ಶಿಕ್ಷಣ ಸಚಿವರೇ ಇಲ್ಲವಾಗಿದ್ದಾರೆ. ಆರು ತಿಂಗಳಿನಿಂದ ಶಿಕ್ಷಣ ಸಚಿವರು ಇಲ್ಲದೆಯೇ ಇಲಾಖೆ ಕಾರ್ಯನಿರ್ವಹಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ವಿದ್ಯಾರ್ಥಿಗಳ ಯೋಗಕ್ಷೇಮ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳಿಗೆ ಬೇಕಾಗಿಲ್ಲ. ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸುವ 14 ಸದಸ್ಯರು ವಿಧಾನ ಪರಿಷತ್ ನಲ್ಲಿದ್ದಾರೆ. ಅವರು ಯಾರೂ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದಿಲ್ಲ  ಎಂದು ಕಿಡಿಕಾರಿದ್ದಾರೆ.


ಅಲ್ಲದೇ ಎನ್. ಮಹೇಶ್ ಅವರು ಶಿಕ್ಷಣ ಖಾತೆಗೆ ರಾಜೀನಾಮೆ ನೀಡಿದ ಬಳಿಕ, ಸಿಎಂ ಕುಮಾರಸ್ವಾಮಿ ಅವರೇ ಖಾತೆ ನಿರ್ವಹಿಸುತ್ತಿದ್ದಾರೆ.ಒತ್ತಡದಿಂದ ಇಲಾಖೆಯತ್ತ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಅಸಮಾಧನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ